ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಸೆ. 25ರಂದು ಜಿಲ್ಲಾ ಸರಕಾರಿ ನೌಕರರ ಸಂಘದ ಮಹಾಸಭೆ

ಬಾಗಲಕೋಟೆ: ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಕೇಂದ್ರ ಸರ್ಕಾರಿ ನೌಕರರ ಮತ್ರು ಖಾಸಗಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಪ್ರಥಮ ವಾರ್ಷಿಕ ಸಭೆ ಸೆ. 25 ರಂದು ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ನವನಗರ ಕಲಾಭವನದಲ್ಲಿ ಅಂದು ಬೆಳಗ್ಗೆ 11ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಉದ್ಘಾಟಿಸುವರು. ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿರುವ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ಶಾಸಕ ವೀರಣ್ಣ ಚರಂತಿಮಠ ವಿತರಿಸುವರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಉಪಸ್ಥಿತರಿದ್ದು, ನೌಕರರನ್ನು ಉದ್ದೇಶಿಸಿ ಸಂಘದ ಸಾಧನೆ ಮತ್ತು ಮುಂದಿನ ಪ್ರಮುಖ ಬೇಡಿಕೆಗಳ ಬಗ್ಗೆ ಮಾತನಾಡುವರು ಎಂದರು.

ಜಿಲ್ಲೆಯಲ್ಲಿ ವಸತಿಗೃಹ ನಿರ್ಮಾಣ ಸಹಕಾರಿ ಸಂಘ ನಿರ್ಮಿಸಲಾಗಿದೆ. ಸಂಘಕ್ಕೆ 4 ಸಾವಿರ ನೌಕರ ಸದಸ್ಯರು ಇದ್ದಾರೆ. ಈಗಾಗಲೇ ನಗರಕ್ಕೆ ಹತ್ತಿರದ ಶಿಗಿಕೇರಿ ಗ್ರಾಮ ವ್ಯಾಪ್ತಿಯಲ್ಲಿ 12 ಎಕರೆ ಜಮೀನು ಖರೀದಿ ಮಾಡಲಾಗಿದ್ದು, ಅಭಿವೃದ್ಧಿ ಪಡಿಸಿ ಸದಸ್ಯರ ಜೇಷ್ಠತೆ ಆಧಾರದ ‌ಮೇಲೆ ಕೈಗೆಟಕುವ ದರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು. ಎಸ್.ಕೆ.ಹಿರೇಮಠ, ಎಸ್.ವಿ.ಸತರಡ್ಡಿ, ಎಸ್. ಎಸದ. ಇಂಜಗನೇರಿ, ವಿಠ್ಠಲ ವಾಲಿಕಾರ ಇದ್ದರು.

Edited By : Nagesh Gaonkar
PublicNext

PublicNext

23/09/2022 03:40 pm

Cinque Terre

20 K

Cinque Terre

0