ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಸಕ ವೀರಣ್ಣ ಚರಂತಿಮಠ, ಮೇಲ್ಮನೆ ಸದಸ್ಯ ಪಿ.ಎಚ್.ಪೂಜಾರಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
ಈ ವೇಳೆ ಸರ್ವಧರ್ಮ ಸಾಮೂಹಿಕ ಪ್ರಾರ್ಥನೆ ನಡೆಯಿತು. ವಿವಿಧ ಧರ್ಮದ ಗುರುಗಳಾದ ಸಂಸ್ಕಂತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಸೇಂಟ್ ಸನ್ಸ್ ಸಿಸ್ಟರ ಪಾಲ್ವಿತ್ ಡಿಸೋಜಾ ಬೈಬಲ್ ಹಾಗೂ ಆಸೀಪ್ ಎಲ್.ಮುದಗಲ್ಲ ಅವರು ಕುರಾನ್ ಕುರಿತು ಉಪದೇಶ ನೀಡಿದರು.
ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿಲಾಯಿತು.
Kshetra Samachara
02/10/2022 02:43 pm