ಬಾಗಲಕೋಟೆ: ಇಲ್ಲಿನ ಶಿವಾಂದ ಜಿನ್ನಿಂಗ್‌ನಲ್ಲಿನ ಬಿಜೆಪಿ ಕಚೇರಿಯಲ್ಲಿಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಶಾಸಕರಾದ ವೀರಣ್ಣ ಚರಂತಿಮಠ, ಪಿ.ಎಚ್. ಪುಜಾರಿ, ಮಾಜಿ ಶಾಸಕ ನಾರಾಯಣಸಾ ಭಾಂಡಗೆ ಮಾತನಾಡಿ, ಮಹಾತ್ಮ ಗಾಂಧೀಜಿ ಕಟ್ಟಿರುವ ಕನಸನ್ನು ಬಿಜೆಪಿ ನನಸಾಗಿಸಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮಾಡಿರುವ ಸಾಧನೆಗಳನ್ನು ಈ ಕಾರ್ಯಕ್ರಮದಲ್ಲಿ ಸ್ಮರಿಸಿದರು.
ಜಿಲ್ಲಾ ಉಪಾಧ್ಯಕ್ಷರು ಅಶೋಕ್ ಲಿಂಬಾವಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ನಗರಸಭೆ ಅಧ್ಯಕ್ಷ ಜ್ಯೋತಿ ಭಜಂತ್ರಿ, ನಗರ ಮಂಡಲ ಅಧ್ಯಕ್ಷ ಸದಾನಂದ ನಾರಾ, ಬಿಟಿಡಿಎ ಸದಸ್ಯ ಶಿವಾನಂದ ಟವಳಿ ಗುಂಡು ರಾವ್ ಸಿಂಧೆ, ಪ್ರಧಾನ ಕಾರ್ಯದರ್ಶಿ ಬಸವರಾಜ್ ಹನುಗುಂದ ಉಮೇಶ್ ಹಂಚಿನಾಳ ಇತರರು ಇದ್ದರು.
PublicNext
02/10/2022 09:36 pm