ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವಾಸೋದ್ಯಮ ಅಭಿವೃದ್ದಿಗೆ ಕ್ರಮ : ಡಿಸಿ ಪಿ.ಪಿ.ಸುನೀಲ್ ಕುಮಾರ

ಬಾಗಲಕೋಟೆ: ಐತಿಹಾಸಿಕ ಪಾರಂಪರಿಕ ತಾಣವಾದ ಬಾದಾಮಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಪಿ.ಪಿ.ಸುನೀಲ್ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಬಾದಾಮಿ ಐತಿಹಾಸಿಕ ತಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬಾದಾಮಿ ಗುಹೆಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಪಾರ್ಕಿಂಗ್ ಸೌಲಭ್ಯ ಹಾಗೂ ಮೂಲ ಸೌಕರ್ಯಗಳ ನಿರ್ಮಾಣಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ ಖರೀದಿಸಿ ಎಪಿಎಂಸಿ ನಿವೇಶನ ಹಸ್ತಾಂತರ, ಅಗಸ್ತ್ಯ ತೀರ್ಥ ಹೊಂಡದ ಮೇಲಿನ ಮನೆಗಳ ತೆರವಿನ ಕಾರ್ಯಾಚರಣೆ, ಹೃದಯ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಹಾಗೂ ಬನಶಂಕರಿಯಲ್ಲಿ ನಿರ್ಮಾಣವಾಗುತ್ತಿರುವ ತ್ರಿಸ್ಟಾರ್ ಹೋಟಲ್ ನಿರ್ಮಾಣ ಕಾಮಗಾರಿ ಸೇರಿದಂತೆ ಇತರೆ ಅಭಿವೃದ್ದಿ ಕಾರ್ಯಗಳ ಪ್ರಗತಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು ಆಗಿರುವ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಶ್ವೇತಾ ಬೀಡಿಕರ, ತಹಶೀಲ್ದಾರ ಜೆ.ಬಿ.ಮಜ್ಜಗಿ, ನಗರ ಮತ್ತು ಗ್ರಾಮಾಂತರ ಯೋಜನಾಧಿಕಾರಿ, ಪುರಸಭೆ ಮುಖ್ಯಾಧಿಕಾರಿ, ಎಪಿಎಂಸಿ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

20/09/2022 06:48 pm

Cinque Terre

3.7 K

Cinque Terre

0