ಬಾಗಲಕೋಟೆ: ಕೇಂದ್ರ ಸರ್ಕಾರಿ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆಗುತ್ತಿರುವ ಬಿ ಮತ್ತು ಸಿ ದರ್ಜೆ ನೌಕರಿಗಳಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಆಗ್ರಹಿಸಿ ಕರವೇ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿಗೆ ಮೂಲಕ ಮುಖ್ಯಮಂತ್ರಿ, ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ 20,000 ಕ್ಕೂ ಹೆಚ್ಚಿನ 'ಬಿ' ಮತ್ತು 'ಸಿ' ದರ್ಜೆಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವಿಕೆಯಿಂದ ಹಿಡಿದು ಎಲ್ಲಾ ಹಂತಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ತನಕ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಯಲಿವೆ. ಇದರಿಂದ ಕನ್ನಡಿಗರರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗಲಿದೆ. ನೇಮಕಾತಿಯ ಎಲ್ಲಾ ಹಂತದ ಪರೀಕ್ಷೆಗಳೂ ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಹಿಂದಿ ಭಾಷಿಕರಿಗೆ ಮಾತ್ರ ಅನುಕೂಲವಾಗಲಿದೆ. ಇತರರಿಗೆ ಭಾಷಾ ಸಮಸ್ಯೆ ಉಂಟಾಗಲಿದೆ ಎಂದು ಕರವೇ ಕಾರ್ಯಕರ್ತರು ದೂರಿದ್ದಾರೆ.
ಇಡೀ ನೇಮಕಾತಿ ಪ್ರಕ್ರಿಯೆಯು ವಲಯವಾರು ನಡೆಸಬೇಕು. ಕನ್ನಡದಲ್ಲಿ ಕೂಡಾ ನಡೆಸಬೇಕು. ಇದರಿಂದ ಕನ್ನಡಿಗರು ಅರ್ಜಿ ಸಲ್ಲಿಸಲು ಮತ್ತು ನೇಮಕವಾಗಲು ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದ್ದಾರೆ. ಬಸವರಾಜ ಧರ್ಮಂತಿ ಭಾಗ್ಯಾ ಬೆಟಗೇರಿ, ಬಸವರಾಜ ಅಂಬಿಗೇರ, ಆತ್ಮಾರಾಮ ನೀಲನಾಯಕ ಇದ್ದರು.
PublicNext
12/10/2022 02:19 pm