ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ : ಸಿದ್ದರಾಮಯ್ಯ , ಡಿಕೆಶಿ ಸಿಎಂ ಆಗಲಾರರು; ಪಾಟೀಲ

ಬಾಗಲಕೋಟೆ : ಮುಂದಿನ ಸಾರ್ವಜನಿಕ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಪಕ್ಷವೇ ಅಧಿಕಾರಕ್ಕೆ ಬಾರದೇ ಸಿದ್ದರಾಮಯ್ಯ ಆಗಲಿ, ಡಿ.ಕೆ. ಶಿವಕುಮಾರ ಆಗಲಿ ಮುಖ್ಯಮಂತ್ರಿ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 113 ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಪೂರ್ಣ ಬಹುತದೊಂದಿಗೆ ನಾವು ಅಧಿಕಾರಕ್ಕೆ ಬರುತ್ತವೆ. ಯಾವ ಸಂಶಯ ಬೇಡ ಎಂದರು.

2024 ರ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪಕ್ಷ 26 ರಿಂದ. 27 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಕಾಂಗ್ರೆಸ್ಸಿಗರು ಅಧಿಕಾರದ ಕನಸು ಕಾಣುತ್ತ ಕಾಲ ಕಳೆಯಬೇಕಷ್ಟೆ ಎಂದರು.

Edited By : Somashekar
PublicNext

PublicNext

18/09/2022 03:43 pm

Cinque Terre

20.25 K

Cinque Terre

0