ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಕೃಷ್ಣೆಯ ಜಲಧಿಗೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಣೆ

ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಆಲಮಟ್ಟಿ ಜಲಾಶಯದಲ್ಲಿ ಕೃಷ್ಣೆಯ ಜಲದಿಗೆ ಬಾಗಿನ ಸಲ್ಲಿಸಿದರು.

ಶುಕ್ರವಾರ ಬೆಳಿಗ್ಗೆ 10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿಗಳು ನೇರವಾಗಿ ಜಲಾಶಯಕ್ಕೆ ತೆರಳಿ ಗಂಗಾ ಪೂಜೆ ಸಲ್ಲಿಸಿ ಬಾಗಿನ ಸಲ್ಲಿಸಿದರು.

ಸಾಂಪ್ರದಾಯಿಕವಾಗಿ ಜಲಾಶಯದ ಬಳಿ ಗಂಗಾ ಪೂಜೆ ಸಲ್ಲಿಸಿದ ನಂತರ ಕೃಷ್ಣೆಗೆ ಬಾಗಿನ ಸಲ್ಲಿಸಿದರು. ಸೀರೆ, ಕುಪ್ಪಸ, ಹಣ್ಣು, ಹೂವು ಕಾಯಿ ಸೇರಿ ನಾನಾ ಪೂಜೆ ಹಾಗೂ ಉಡಿ ತುಂಬುವ ಸಾಮಗ್ರಿಯುಳ್ಳ ಬಾಗಿನವನ್ನು ಕೃಷ್ಣೆಯ ಮಡಲಿಗೆ ಮುಖ್ಯಮಂತ್ರಿಗಳು ಸಮರ್ಪಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಶಿವಾನಂದ ಪಾಟೀಲ, ಸೋಮನಗೌಡ ಪಾಟೀಲ, ಪಿ.ಎಚ್. ಪೂಜಾರ, ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಸಚಿವ ಸಂಗಣ್ಣ ಬೆಳ್ಳುಬ್ಬಿ, ಶ್ರೀಕಾಂತ ಕುಲಕರ್ಣಿ ಇತರರು ಇದ್ದರು.

Edited By : Vijay Kumar
PublicNext

PublicNext

30/09/2022 12:56 pm

Cinque Terre

15.64 K

Cinque Terre

0