ಬಾಗಲಕೋಟೆ: ಆಲಮಟ್ಟಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅತಿಥಿ ಗೃಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಇದೇ ಸಂದರ್ಭಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕ ಎ.ಎಸ್ ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್ ಪೂಜಾರ, ಮಾಜಿ ಶಾಸಕರಾದ, ಶ್ರೀಕಾಂತ ಕುಲಕರ್ಣಿ, ಎಸ್.ಕೆ ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಇದ್ದರು.
PublicNext
30/09/2022 06:01 pm