ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಮಸಾಲಿ ಸಮುದಾಯಕ್ಕೂ ಮೀಸಲು ಸೌಲಭ್ಯ ನೀಡಲಿ; ಕಾಶಪ್ಪನವರ

ಬಾಗಲಕೋಟೆ: ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿರುವುದನ್ನು ಸ್ವಾಗತಿಸಿರುವಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿ ಸಮುದಾಯಕ್ಕೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಇಳಕಲ್ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಂಚಮಸಾಲಿ ಸಮುದಾಯಕ್ಕೂ ಮೀಸಲು ನಿಗದಿ ಬಗೆಗೆ ಸರ್ವ ಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಿರಂತರವಾಗಿ ಎರಡು ವರ್ಷಗಳಿಂದ ಪಂಚಮಸಾಲಿ ಸ್ವಾಮೀಜಿ ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ . ಎಲ್ಲ ಲಿಂಗಾಯತ ಒಳಸಮುದಾಯವನ್ನು ಕೇಂದ್ರವು ಒಬಿಸಿ ಸೇರ್ಪಡೆಗೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದೇವೆ . ಈ ಬಗ್ಗೆ ಸರ್ವ ಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು .

Edited By : Nirmala Aralikatti
Kshetra Samachara

Kshetra Samachara

08/10/2022 07:47 pm

Cinque Terre

3.3 K

Cinque Terre

0