ಬಾಗಲಕೋಟೆ: ಜಿಲ್ಲೆಯಿಂದ ಮಹಿಳೆಯರು ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುಂತೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷ ವೀಣಾ ಕಾಶಪ್ಪನವರ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಳ್ಳಾರಿ ಸಮಾವೇಶ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಯಶಸ್ಸು ಸಿಕ್ಕುತ್ತಿದೆ. ಜನ ಸಾಗರೋಪಾದಿಯಲ್ಲಿ ಸೇರುತ್ತಿದ್ದಾರೆ.ಹಾಗಾಗಿ ಯಾತ್ರೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬಳ್ಳಾರಿ ಸಮಾವೇಶಕ್ಕೆ ಮಹಿಳೆಯರೂ ಸೇರಿದಂತೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಎಚ್. ವೈ. ಮೇಟಿ, ಮಾಜಿ ಸಚಿವರಾದ ಆರ್.ಬಿ. ತಿಮ್ಮಾಪುರ, ಅಜಯಕುಮಾರ ಸರನಾಯಕ, ಎಂ.ಬಿ. ಸೌದಾಗರ, ಕಾಶಿನಾಥ ಹುಡೇದ, ನಾಗರಾಜ್ ಹದ್ಲಿ, ಎಸ್. ಎಂ. ರಾಂಪೂರ, ದಯಾನಂದ ಪಾಟೀಲ, ನಂದು ಪಾಟೀಲ, ಸತೀಶ ಬಂಡಿವಡ್ಡರ ಇತರರು ಇದ್ದರು.
Kshetra Samachara
08/10/2022 07:53 pm