ಬಾಗಲಕೋಟೆ: ಪ್ರತಿಯೊಬ್ಬ ಕ್ರೀಡಾ ಪಟುಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಕಾಪಾಡುತ್ತದೆ. ಆರೋಗ್ಯಕರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಾತನಾಡಿ ಅವಕಾಶ ಸಿಕ್ಕಾಗ ಅದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು. ಯಾವ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಇದೆಯೋ ಅದರ ಮೇಲೆ ಹೆಚ್ಚು ಗಮನ ಹರಿಸಬೇಕು. ಕ್ರೀಡೆಗಳು ಮನುಷ್ಯನ ಆರೋಗ್ಯದ ಜೊತೆಗೆ ಕಲಿಕೆಗೂ ಸಹಾಯಕವಾಗುತ್ತದೆ ಎಂದರು.
ಪ್ರಾರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿ ಸ್ವಾಗತಿಸಿದರು. ನಂತರ ವಿವಿಧ ಕ್ರೀಡೆಗಳಿಗೆ ಚಾಲನೆ ದೊರೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು
Kshetra Samachara
18/09/2022 07:34 pm