ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್:‌ ಶಾರ್ಟ್ ಸರ್ಕಿಟ್ ಅವಾಂತರ; ಟೈಲ್ಸ್‌ ಗೋದಾಮು ಸರಕು ಭಸ್ಮ

ಆನೇಕಲ್:‌ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಟೈಲ್ಸ್ ಗೋದಾಮು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ಸಂಭವಿಸಿದೆ.

ಇನ್ನು, ಈ ಅವಘಡಕ್ಕೆ ಪ್ರಮುಖ ಕಾರಣವೇ ಶಾರ್ಟ್ ಸರ್ಕಿಟ್ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಗೋದಾಮಿನಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಬೆಂಕಿಯಿಂದಾಗಿ ಕಿಲೋಮೀಟರ್ ಗಟ್ಟಲೆ ದೂರದವರೆಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಆ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

06/01/2022 09:15 pm

Cinque Terre

92

Cinque Terre

0

ಸಂಬಂಧಿತ ಸುದ್ದಿ