ಬೆಂಗಳೂರಿನಲ್ಲಿ ಸ್ಕೂಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಘಟನೆ ಬನಶಂಕರಿ ಸಂಚಾರಿ ಠಾಣಾ ವ್ಯಾಪ್ತಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆಯಲ್ಲಿ ಪ್ರಜ್ವಲ್ (21) ಎಂಬ ವಿದ್ಯಾರ್ಥಿ ತಲೆಗೆ ಗಂಭೀರ ಗಾಯವಾಗಿದ್ದು, ದಯಾನಂದ್ ಸಾಗರ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಮತ್ತೋರ್ವ ಯುವಕ ಹಾಗೂ ಪಾದಚಾರಿ ಯುವತಿಗೆ ಗಾಯವಾಗಿದೆ. ಗಾಯಾಳು ಪ್ರಜ್ವಲ್‌ನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
10/08/2022 03:54 pm