ಆನೇಕಲ್: ಚಕ್ರ ಮುರಿದು ರಥ ಕೆಳಗೆ ಬಿದ್ದ ಪರಿಣಾಮವಾಗಿ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕರ್ನಾಟಕ ಗಡಿ ಭಾಗದ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಪಾಪರ್ ಪಟ್ಟಿಯ ಮಾತೇನಹಳ್ಳಿ ದೇವಾಲಯದ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದರು. ಈ ವೇಳೆ ರಥದ ಚಕ್ರ ಮುರಿದ ಪರಿಣಾಮವಾಗಿ ರಥ ಕೆಳಗೆ ಬಿದ್ದ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗಳಾಗಿವೆ.
ಇನ್ನೂ ಅವಘಡದಲ್ಲಿ ಮನೋಕರನ್ (57) ಮತ್ತು ಸರವಣನ್ (50) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಗಳು ಎನ್ನಲಾಗಿದೆ. ಮುಖ್ಯಮಂತ್ರಿಗಳ ಸಾಮಾನ್ಯ ಪರಿಹಾರ ನಿಧಿಯಿಂದ ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಘೋಷಿಸಿದ್ದಾರೆ.
Kshetra Samachara
15/06/2022 07:30 pm