ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ರಕ್ಕಸ ಗುಂಡಿಗೆ ಮತ್ತೊಂದು ಬಲಿ

ಬೆಂಗಳೂರು : ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ದುರಂತ ಎಂದರೆ ಮಹಿಳೆ ದ್ವಿ ಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ರಸ್ತೆಗುಂಡಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

ಇದೇ ಗುಂಡಿಗಳ ಹಾವಳಿಯಿಂದ ಮೊನ್ನೆಯಷ್ಟೇ ಇದೇ ರಸ್ತೆಯಲ್ಲಿ ಟಿಪ್ಪರ್ ಹರಿದು ಪೊಲೀಸ್ ಕಾನ್ಸಟೇಬಲ್ ಕೂಡಾ ಸಾವನ್ನಪ್ಪಿದ್ದರು . ಇಂದು ಮತ್ತೆ ಟಿಪ್ಪರ್ ಗೆ ಮಹಿಳೆ ಬಲಿಯಾಗಿದ್ದಾರೆ. ಇನ್ನು ಒಂದೇ ಕುಟುಂಬದ ಮೂವರು ಬೈಕ್ ನಲ್ಲಿ ಸಾಗುತ್ತಿರುವಾಗ ಈ ಅವಘಡ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ್ದರೇ ಬೈಕ್ ನಲ್ಲಿದ್ದ ಮತ್ತಿಬ್ಬರಿಗೂ ಗಂಭೀರ ಗಾಯವಾಗಿದೆ.

Edited By : Manjunath H D
Kshetra Samachara

Kshetra Samachara

08/10/2021 12:24 pm

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ