ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಸಂಪ್ ನೊಳಗೆ ಮಗು ಬಿದ್ದು ಸಾವನ್ನಪ್ಪಿರುವ ಘಟನೆ
ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದ ಗ್ರೌಂಡ್ ಪ್ಲೋರ್ ನಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ನೀರು ನಿಂತಿತ್ತು.ಕಟ್ಟಡದ ಮುಂಭಾಗದಲ್ಲಿರುವ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಚೆಂಡು ಕಟ್ಟಡದ ಒಳಗೆ ಹೋಗಿದೆ ಇದನ್ನು ತರಲು ಹೋಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಮಗು ಸಾವನ್ನಪ್ಪಿದ್ದು ಮೃತ ದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು
ಇನ್ನೊಂದು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
19/10/2021 07:10 pm