ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟ: 7 ಜನರಿಗೆ ತೀವ್ರ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 7 ಜನರಿಗೆ ತೀವ್ರವಾಗಿ ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಜಿಗಣಿ ಪೊಲೀಸ್ ಠಾಣೆಯ ಹಿಂಭಾಗದಲ್ಲೇ ಈ ಘಟನೆ ನಡೆದಿದೆ.

ಮಂಜುನಾಥ್ ರೆಡ್ಡಿ ಎಂಬುವವರಿಗೆ ಸೇರಿದ ಈ ಮನೆಯಲ್ಲಿ ಉತ್ತರ ಭಾರತ ಮೂಲದ ಏಳು ಜನ ಕಾರ್ಮಿಕರು ಬಾಡಿಗೆಗೆ ಇದ್ದರು ಎಂಬ ಮಾಹಿತಿ ಇದೆ. ಇಂದು ಶನಿವಾರ ಬೆಳಿಗ್ಗೆ ಮನೆಯಲ್ಲಿದ್ದ 15 ಕೆಜಿ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಕಾರ್ಮಿಕರಾದ ಜಗದೀಶ್, ಶಾಂತಿಬೈ, ಪ್ರಕಾಶ್, ಕಾಡು, ಜೈಮುಲ್, ಮಂಜು,ವಲ್ಲಿ ಎಂಬುವವರುಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎಲ್ಲ ಕಾರ್ಮಿಕರು ಕಳೆದ ಎರಡು ವರ್ಷಗಳಿಂದ ಇದೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

06/11/2021 03:31 pm

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ