ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮಧ ಆ್ಯಂಬುಲೆನ್ಸ್ ಜಖಂಗೊಂಡಿದೆ. ಜಖಂ ವಾಹನ ತೆರವುಗೊಳಿಸಲು ವಿಳಂಬವಾದ ಕಾರಣ ಟ್ರಾಫಿಕ್ ಜಾಮ್ ಆಗಿ ಜನರು ಪರದಾಡಿದ ಘಟನೆ ನಡೆಯಿತು.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಬಳಿ ಘಟನೆ ನಡೆದಿದ್ದು, ನಿಂತಿದ್ದ ಒಂದು ಕಾರ್‌ಗೆ ಎರಡು ಕಾರ್ ಹಾಗೂ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿವೆ. ಈ ಎಲ್ಲ ವಾಹನಗಳು ಜಖಂಗೊಂಡಿವೆ. ಘಟನೆಯಿಂದ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತುಮಕೂರು-ಬೆಂಗಳೂರು ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
14/11/2021 10:49 am