ಬೆಂಗಳೂರು: ದೇವನಹಳ್ಳಿ ಏರ್‌ಪೋರ್ಟ್ ರಸ್ತೆ ಎನ್.ಹೆಚ್ 7 ಬೆಟ್ಟಹಲಸೂರು ಕ್ರಾಸ್ ಬಳಿಯ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು 3 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನುಳಿದ ಮೂರು ಜನರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ಬೆಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವನಹಳ್ಳಿ ಕಡೆಯಿಂದ ಬರುತ್ತಿದ್ದ ಕಾರಿನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ದೇವನಹಳ್ಳಿ ಕಡೆಯಿಂದ ಬರ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಎದುರಿನ ರಸ್ತೆಯ ಟ್ಯಾಕ್ಸಿಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಟ್ಯಾಕ್ಸಿಯಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟಹಲಸೂರು ಕ್ರಾಸ್ ಬಳಿ ಘಟನೆ ನಡೆದಿದೆ.
Kshetra Samachara
18/11/2021 10:56 pm