ನೆಲಮಂಗಲ:ಪಾದಚಾರಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಸಂಭವಿಸಿದೆ. ಮೃತ ದುರ್ದೈವಿ 38 ವರ್ಷದ ರವಿಕುಮಾರ್ ಎಂದು ಗುರುತಿಸಲಾಗಿದ್ದು, ಮೂಲತಃ ಮಾಗಡಿ ತಾಲೂಕಿನ ಚನ್ನಬೈರಪ್ಪನಪಾಳ್ಯ ಗ್ರಾಮದ ನಿವಾಸಿ ಆಗಿದ್ದಾರೆ.
ಮೃತದೇಹ ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/11/2021 04:47 pm