ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವನಹಳ್ಳಿ : ಎಳನೀರು ಕುಡಿಯಲೆಂದು ರಸ್ತೆ ದಾಟುತ್ತಿದ್ದ ವ್ಯಕ್ತಿ ಹಿಟ್ ಆಂಡ್ ರನ್ ಗೆ ಬಲಿ

ದೇವನಹಳ್ಳಿ : ಎಳನೀರು ಕುಡಿಯಲೆಂದು ರಸ್ತೆ ದಾಟುತ್ತಿದ್ದ ವ್ಯಕ್ತಿ ಹಿಟ್ ಆಂಡ್ ರನ್ ಗೆ ಬಲಿಯಾಗಿದ್ದಾನೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಅಪಘಾತದ ತೀವ್ರತೆಗೆ ಆತನ ದೇಹ ಎರಡು ಭಾಗವಾಗಿದೆ. ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಬೆಟ್ಟಕೋಟೆ ನಿವಾಸಿ 35 ವರ್ಷದ ಶಿವಪ್ರಸಾದ್ ಸಾವನ್ನಪ್ಪಿದ್ದಾನೆ.

ಘಟನೆಯ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

Edited By : Nagesh Gaonkar
Kshetra Samachara

Kshetra Samachara

20/12/2021 06:38 pm

Cinque Terre

1.07 K

Cinque Terre

0

ಸಂಬಂಧಿತ ಸುದ್ದಿ