ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಕಾರ್ಮಿಕರು ಬಚಾವ್‌

ಬೆಂಗಳೂರು: ಬೆಂಗಳೂರು ಹೊರವಲಯದ ಕೆಂಗೇರಿ ಸಮೀಪದ ಕುಂಬಳಗೋಡುವಿನ‌ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ. ಈ ಫ್ಯಾಕ್ಟರಿಯಲ್ಲಿ 4 ಮಂದಿ ಕೆಲಸ ಮಾಡ್ತಿದ್ದರು ಎನ್ನಲಾಗಿದ್ದು, ಬೆಂಕಿ ಹೊತ್ತಿಕೊಂಡ ತಕ್ಷಣ ಒಳಗಿದ್ದ ಎಲ್ಲ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ.

ಅದೃಷ್ಟವಶಾತ್‌ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಯಾವ ಕಾರಣಕ್ಕೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ? ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತೇ ? ಅಥವಾ ಯಾರಾದರೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರಾ ? ಎಂಬ ಬಗ್ಗೆ ತನಿಖಾಧಿಕಾರಿಗಳು ಸ್ಪಷ್ಟಪಡಿಸಬೇಕಿದೆ.

ಸ್ಥಳಕ್ಕೆ 8 ಆಗ್ನಿ ಶಾಮಕ ದಳ ವಾಹನ ಧಾವಿಸಿ ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇದು ಯಾವ ಕೆಮಿಕಲ್ ಫ್ಯಾಕ್ಟರಿ? ಮಾಲೀಕರು ಯಾರು? ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣವೇನು? ಈ ಬಗ್ಗೆ ಕುಂಬಳಗೋಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

* ಸುರೇಶ್ ಬಾಬು Public Next ಬೆಂಗಳೂರು

Edited By : Manjunath H D
Kshetra Samachara

Kshetra Samachara

04/01/2022 07:21 am

Cinque Terre

680

Cinque Terre

0

ಸಂಬಂಧಿತ ಸುದ್ದಿ