ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ : 40 ಪ್ರಯಾಣಿಕರು ಪಾರು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇದ್ದಕ್ಕಿಂದ್ದಂತೆ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ.ನಗರದ ಚಾಮರಾಜಪೇಟೆಯ ಮಕ್ಕಳ ಕೂಟ ಸರ್ಕಲ್ ಬಳಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, KA57F 1592 ಬಸ್ ನಲ್ಲಿ 40 ಮಂದಿ ಪ್ರಯಾಣ ಮಾಡುತ್ತಿದ್ದರು.ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೂಡಲೇ ಕೆಳಗೆ ಇಳಿಸಿದ್ದಾರೆ.ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬಸ್ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.

ಮೆಜೆಸ್ಟಿಕ್ ನಿಂದ ಚಾಮರಾಜಪೇಟೆ ವಿ.ವಿ.ಪುರಂ ಮಾರ್ಗವಾಗಿ ಗೆ ಮಕ್ಕಳಕೂಟ ಬಸ್ ನಿಲ್ದಾಣಕ್ಕೆ ಬರ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಚಲಿಸುವ ವೇಳೆ ಬಸ್ ನಲ್ಲಿ ಮೊದಲು ಹೊಗೆ ಕಾಣಿಸಿ ಕೊಂಡಿದೆ.ಬಳಿಕ ಡ್ರೈವರ್ ಬೆಂಕಿ ಎಂದು ಕಿರುಚಿದ್ದಾರೆ. ತಕ್ಷಣವೇ ಕೆಳಗೆ ಇಳಿದು ನೋಡಿದಾಗ ಬಸ್ ಬೆಂಕಿ ಆವರಿಸಿಕೊಂಡಿದೆ.

ಸರಿ –ಸುಮಾರು 40 ಸಾವಿರ ರೂ ಮೌಲ್ಯದ ಟಿಕೆಟ್,ಬಸ್ ಪಾಸ್ ಅಗ್ನಿಗೆ ಆಹುತಿಯಾಗಿದೆ ಎಂದು ಕಂಡಾಕ್ಟರ್ ಮಾಹಿತಿ ನೀಡಿದ್ದಾರೆ.

Edited By : Manjunath H D
PublicNext

PublicNext

21/01/2022 12:34 pm

Cinque Terre

40.46 K

Cinque Terre

0

ಸಂಬಂಧಿತ ಸುದ್ದಿ