ಬೆಂಗಳೂರು: ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದಿರುವ ಘಟನೆ ರಾಜ್ ಕುಮಾರ್ ಸಮಾಧಿ ಬಳಿಯ ರಸ್ತೆಯಲ್ಲಿ ನಡೆದಿದೆ. ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಈ ಅಪಘಾತ ನಡೆದಿದೆ.
ತಡರಾತ್ರಿ ಹನ್ನೆರಡು ಗಂಟೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸುಮಾರು ಇಪ್ಪತೈದರಿಂದ ಮೂವತ್ತು ವಯಸ್ಸಿನ ಅಸ್ಸಾಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ತೆರಳುತಿದ್ದವರು.
ಅಪಘಾತ ದಲ್ಲಿ ಕುಮಾರ್ ಲಿಂಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುನಿಲ್ ಎಂಬಾತನಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಸುನಿಲ್ ಸಹ ಸಾವನ್ನಪ್ಪಿದ್ದಾನೆ.
ಮಂದಗತಿಯಲ್ಲಿ ಸಾಗುತಿದ್ದ ಲೋಡೆಡ್ ಕ್ಯಾಂಟರ್ ಗೆ ವೇಗವಾಗಿ ಹಿಂದಿನಿಂದ ಬಂದು ಸ್ಕೂಟರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿ, ಕ್ಯಾಂಟರ್ ವಶ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
PublicNext
24/01/2022 09:10 am