ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ನೈಸ್ ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಆನೇಕಲ್: ರಸ್ತೆಯಲ್ಲಿ ಚಲಿಸುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ ಸುಧಾಕರ್ ಎಂಬುವರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದು ಬಂದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ನೈಸ್ ರಸ್ತೆಯ ಟೋಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಇನ್ನು ದೃಶ್ಯಾವಳಿಗಳನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

24/01/2022 05:39 pm

Cinque Terre

1.12 K

Cinque Terre

0

ಸಂಬಂಧಿತ ಸುದ್ದಿ