ಆನೇಕಲ್: ಬಿಎಂಟಿಸಿ ಬಸ್ ಟೈಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.
ಅತ್ತಿಬೆಲೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇನ್ನು ಬಸ್ ನಲ್ಲಿ ಸುಮಾರು 20 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದು, ಬಸ್ ಚಾಲಕನಿಗೆ ಕಾಲು ಮುರಿದಿದೆ.
ಅದೃಷ್ಟವಶಾತ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
24/01/2022 06:29 pm