ಬೆಂಗಳೂರು: ಬೆಳ್ಳಂಬೆಳಗ್ಗೆಯೇ ನಗರದ ಪ್ಯೂಮಾ ಶೋ ರೂಮ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ದಾಸರಹಳ್ಳಿ ಸಮೀಪದ ಬಾಗಲಗುಂಟೆಯಲ್ಲಿ ಸಂಭವಿಸಿದೆ.
ಶೋ ರೂಂನ ಯುಪಿಎಸ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿಕೊಳ್ಳುತ್ತಿದ್ದಂತೆಯೇ ಶೋ ರೂಂ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೀಣ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
Kshetra Samachara
26/01/2022 06:31 pm