ಬೆಂಗಳೂರು: ನಗರದಲ್ಲಿ ತಡರಾತ್ರಿ ಡಿವೈಡರ್ ಗೆ ಇನೋವಾ ಕ್ರಿಸ್ಟಾ ಕಾರು ಡಿಕ್ಕಿಯಾಗಿದೆ. ಮಂತ್ರಿ ಮಾಲ್ ಬಳಿ ಸ್ಪೀಡ್ ನಲ್ಲಿ ಬಂದು ಡಿವೈಡರ್ ಗೆ ಡಿಕ್ಕಿಯಾಗಿರೋ ದೃಶ್ಯ ಕಂಡು ಬಂದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಇನ್ನು, ಘಟನೆ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಈ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿರೋ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕುಡಿದ ಅಮಲಿನಲ್ಲಿ ಸೆಲ್ಫ್ ಆಕ್ಸಿಡೆಂಟ್ ಆಗಿರೋ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ. ರಸ್ತೆ ಖಾಲಿಯಿದ್ದರೂ ಸೀದಾ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿರೋ ಚಾಲಕನ ಚಾಲನೆಗೆ ಪೊಲೀಸ್ರು ಈ ಅನುಮಾನ ವ್ಯಕ್ತಪಡಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸಿರೋ ಪೊಲೀಸ್ರು ರಿಪೋರ್ಟ್ ಬಂದ ನಂತರ ಡ್ರಂಕ್ ಡ್ರೈವ್ ಅಡಿ ಕೇಸ್ ದಾಖಲಿಸಿ, ತನಿಖೆ ನಡೆಸಲಿದ್ದಾರೆ.
Kshetra Samachara
27/01/2022 12:44 pm