ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನಾರೋಗ್ಯ ರೈಲಿಗೆ ತಲೆ ಕೊಟ್ಟು ಪ್ರಾಣ ಬಿಟ್ಟ ಯುವಕ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಯಶವಂತಪುರ ಬಳಿ ನಡೆದಿದೆ.ಯಾದಗಿರಿ ಮೂಲದ 23ವರ್ಷದ ಹನುಮಂತು ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದು,ಯಶವಂತಪುರ ಕೊಲಂಬಿಯಾ ಆಸ್ಪತ್ರೆ ಬಳಿಯ ರೈಲ್ವೆ ಹಳಿಯಲ್ಲಿ ಘಟನೆ ನಡೆದಿದೆ.

ಕಿಡ್ನಿ ಫೆಲ್ಯೂರ್ ಆಗಿದ್ದ ಹಿನ್ನೆಲೆ ಮನನೊಂದಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ.ಯುವಕನ ತಂದೆ ತಾಯಿ ಬಿಬಿಎಂಪಿಯಲ್ಲಿ ಕೂಲಿ ಕಾರ್ಮಿಕರಾಗಿದ್ದು, ಹನುಮಂತನಿಗೆ ಚಿಕಿತ್ಸೆ ಕೊಡಿಸಿದ್ರು ರೋಗ ವಾಸಿಯಾಗಿರ್ಲಿಲ್ಲ ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗ್ತಿದೆ.

ಸದ್ಯ ಯಶವಂತಪುರ ರೈಲ್ವೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/02/2022 12:16 pm

Cinque Terre

1.05 K

Cinque Terre

0

ಸಂಬಂಧಿತ ಸುದ್ದಿ