ಆನೇಕಲ್: ಇಂದು ಬೆಳಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕೆಟ್ಟು ನಿಂತಿದ್ದ ಲಾರಿಯನ್ನು ರಸ್ತೆಯಲ್ಲಿ
ಅಜಾಗರೂಕತೆಯಿಂದ ನಿಲ್ಲಿಸಲಾಗಿತ್ತು. ಇದರ ಪರಿಣಾಮ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಘಟನೆ ಆನೇಕಲ್‌ನ ಗುಮ್ಮಾಳಪುರ ರಸ್ತೆಯ ಸುಣವಾರ ಗೇಟ್ ಬಳಿ ಸಂಭವಿಸಿದೆ.
ಆನೇಕಲ್ ಪಟ್ಟಣದ ನಿವಾಸಿ ಶ್ರೀನಿವಾಸ್ ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯಾಗಿದ್ದು, ಸಂತೆ ಮಾರ್ಕೆಟ್ ನಲ್ಲಿ ಸೊಪ್ಪುಗಳನ್ನ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ತೆಲಗರಹಳ್ಳಿ ಬಳಿ ಜಮೀನನ್ನು ಬಾಡಿಗೆಗೆ ಪಡೆದು ಸೊಪ್ಪುಗಳನ್ನ ಬೆಳೆಯುತ್ತಿದ್ದು, ಕುರಿಗಳನ್ನ ಕಟ್ಟಿಕೊಂಡಿದ್ದರು.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಕುರಿಗಳಿಗೆ ಮೇವು ಹಾಕಿ ವಾಪಸ್ ಆನೇಕಲ್ ಮಾರ್ಗವಾಗಿ ಬರುವ ಸಂದರ್ಭದಲ್ಲಿ ಸುಣವಾರ ಗೇಟ್ ಬಳಿ ಕೆಟ್ಟು ನಿಂತಿದ್ದ ಲಾರಿಯನ್ನು ಚಾಲಕ ಅಜಾಗರೂಕತೆಯಿಂದ ರಸ್ತೆ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ರು .
ಯಾವುದೇ ಮುನ್ನೆಚ್ಚರಿಕೆ ಸೂಚನೆಗಳನ್ನ ಹಾಕದೆ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದರಿಂದ ದ್ವಿಚಕ್ರ ವಾಹನ ಸವಾರ ಶ್ರೀನಿವಾಸ್ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.
ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
Kshetra Samachara
07/02/2022 08:02 pm