ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಿವರಾತ್ರಿ ದಿನ ಸನ್ಸರ್ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿಅವಘಡ

ಬೆಂಗಳೂರು:ಶಿವರಾತ್ರಿ ದಿನ ನಗರದ ಸನ್ಸರ್ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬಾಣಸವಾಡಿಯ ಈ ಅಪಾರ್ಟ್ಮೆಂಟ್ ನ ಎರಡನೇ ಫ್ಲೋರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಗೆ ಮನೆಯಲ್ಲಿದ್ದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ಕೊಟ್ಟ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಅಗ್ನಿ ಅವಘಡಕ್ಕೆ ಯಾವುದೆ ಪ್ರಾಣಹಾನಿಯಾಗಿಲ್ಲ.ಅಪಾರ್ಟ್‌ಮೆಂಟ್‌ನಲ್ಲಿ ನಾಲ್ಕನೇ ಪ್ಲೋರಿನಲ್ಲಿ ಸಿಲುಕಿದ್ದ ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

02/03/2022 08:30 am

Cinque Terre

1.78 K

Cinque Terre

0

ಸಂಬಂಧಿತ ಸುದ್ದಿ