ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟ 10ಜನರಿಗೆ ಗಂಭೀರ ಗಾಯ

ಬೆಂಗಳೂರು: ಇಂದಿರಾನಗರದ ಸಿಎಂಎಚ್ ರಸ್ತೆಯ ನ್ಯೂ ಶಾಂತಿ ಸಾಗರ ಹೋಟೆಲ್‌ನಲ್ಲಿ ಗ್ಯಾಸ್ ಸೋರಿಕೆಯಿಂದ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಹೋಟೆಲ್‌ನಲ್ಲಿದ್ದ ಗ್ರಾಹಕರ ಸಹಿತ ಸುಮಾರು 10 ಜನರಿಗೆ ಗಂಭೀರಗಾಯಗಳಾಗಿವೆ. ಗಾಯಾಳುಗಳನ್ನ ಸಿಎಂಎಚ್ ಆಸ್ಪತ್ರೆ ಮತ್ತು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದು, ಗ್ಯಾಸ್ ಲೀಕ್ ಆಗುತ್ತಿದ್ದಂತೆ ಗ್ರಾಹಕರನ್ನ ಹೊರಗಡೆ ಕಳುಹಿಸಿದ ಹೋಟೆಲ್ ಸಿಬ್ಬಂದಿ ಸಿಲಿಂಡರ್ ಪರಿಶೀಲಿಸುವಷ್ಟರಲ್ಲೇ ಸ್ಫೋಟಗೊಂಡಿದೆ. ಘಟನೆಯಲ್ಲಿ ಹೋಟೆಲ್ ಸಿಬ್ಬಂದಿಗಳಾದ ನರಸಿಂಹ, ಜಗ್ಗ, ಗಂಗಾಧರ,ಕೃಷ್ಣ , ಕೃಷ್ಣ ಸೇರಿದಂತೆ 10ಜನರಿಗೆ ಗಾಯಗಳಾಗಿವೆ. ಇನ್ನು ಕೆಲವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
PublicNext

PublicNext

05/03/2022 09:14 pm

Cinque Terre

38.01 K

Cinque Terre

0

ಸಂಬಂಧಿತ ಸುದ್ದಿ