ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಬೂದಿಗೆರೆಯ ಹಾಥ್ ವೇ ಕೇಬಲ್ ಆಫೀಸ್ ಗೆ ಬೆಂಕಿ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹಾಥ್-ವೇ ಕೇಬಲ್ ಆಫೀಸ್ ಮತ್ತು ಗ್ಯಾಸ್ ಅಂಗಡಿಗೆ ಬೆಂಕಿ ಬಿದ್ದಿದೆ. ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ವಸ್ತು ಸುಟ್ಟು ಕರಕಲಾಗಿವೆ. ಬೆಂಕಿ ದುರಂತ ಹಿನ್ನೆಲೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನು ತಿಳಿದು ಬಂದಿಲ್ಲ. ಬೂದಿಗೆರೆಯ ಲಕ್ಷ್ಮಣ್ ಮೂರ್ತಿ ಎಂಬುವವರಿಗೆ ಸೇರಿದ ಕಚೇರಿ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೇವನಹಳ್ಳಿಯ ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Edited By : Shivu K
PublicNext

PublicNext

06/03/2022 09:28 pm

Cinque Terre

40.26 K

Cinque Terre

0

ಸಂಬಂಧಿತ ಸುದ್ದಿ