ಯಲಹಂಕ: ಬೆಂಗಳೂರು ಏರ್ ಪೋರ್ಟ್ ರಸ್ತೆ ಬೆಟ್ಟಹಲಸೂರು ಕ್ರಾಸ್ ಫ್ಲೈ ಓವರ್ ಮೇಲೆ ಟ್ಯಾಕ್ಸಿ( ಕಾರು) ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ.
ಕಾರುಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಕಾರು ಪಲ್ಟಿಗೆ ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ದೇವನಹಳ್ಳಿ ಏರ್ ಪೋರ್ಟ್ ಗೆ ತೆರಳುತ್ತಿದ್ದ ಕಾರು, ಇಂದು ಬೆಳಗ್ಗೆ 7ರ ಸುಮಾರಿಗೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಪಟ್ಟಿಯಿಂದ ಏರ್ ಪೋರ್ಟ್ ರಸ್ತೆಯಲ್ಲಿ ಸ್ವಲ್ಪಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಚಿಕ್ಕಜಾಲ ಸಂಚಾರಿ ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಕಾರನ್ನು ರಸ್ತೆಯ ಪಕ್ಕಕ್ಕೆ ಸರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಚಿಕ್ಕಜಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
09/03/2022 10:53 am