ಬೆಂಗಳೂರು: ಯುವಕನೊಬ್ಬ ನಡುರಸ್ತೆಯಲ್ಲೇ ಕಾರಿನೊಂದಿಗೆ ಸುಟ್ಟು ಕರಕಲಾದ ದಾರುಣ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನೈಸ್ ರಸ್ತೆಯ ಚನ್ನಸಂದ್ರ ಬ್ರಿಡ್ಜ್ ಬಳಿ ಈ ಅವಘಡದ ಭೀಕರತೆ ಕಂಡು ಬಂದಿದ್ದು, ಕಾರು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿ ನೈಸ್ ರಸ್ತೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಸುಮಾರು 40ರ ಹರೆಯದ ದರ್ಶನ್ ಎಂಬವರು ಕಾರಿನೊಂದಿಗೆ ಬೆಂಕಿಯಲ್ಲಿ ಸುಟ್ಟುಕರಕಲಾಗಿದ್ದಾರೆ. ತುಮಕೂರು ರಸ್ತೆ ಬಳಿ ಸಂಬಂಧಿಕರ ಕಾರ್ಯಕ್ರಮಕ್ಕೆಂದು ತೆರಳಿದ್ದ ದರ್ಶನ್, ಬಿಪಿಒ ಕಾಲ್ ಸೆಂಟರ್ ನಲ್ಲಿ ಅಡ್ಮಿನ್ ಆಗಿ ಕೆಲಸ ಮಾಡ್ತಿದ್ರು.
ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
-ರಂಜಿತ ಎಂ. ʼಪಬ್ಲಿಕ್ ನೆಕ್ಸ್ಟ್ʼ ಬೆಂಗಳೂರು
PublicNext
13/03/2022 03:45 pm