ದೇವನಹಳ್ಳಿ: ಚಿಕ್ಕಾಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಒಂದರ ಹಿಂದೆ ಒಂದು ಚಲಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಓವರ್ ಟೇಕ್ ಮಾಡಲು ಹೋಗಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.
ಈ ದುರಂತದಲ್ಲಿ ಆಂಧ್ರ ಪ್ರದೇಶ ಮೂಲದ ಲಾರಿ ಚಾಲಕ ಸಜೀವ ದಹನವಾಗಿದ್ದಾನೆ. ಮತ್ತೊಂದು ಲಾರಿಯೂ ಜಖಂ ಆಗಿದೆ. ದೇವನಹಳ್ಳಿ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 7ರ ಕುರುಬರಕುಂಟೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಭುಕ್ತಿ ಡಾಬಾ ಬಳಿ ಅಪಘಾತ ಸಂಭವಿಸಿದೆ. ಗುರುವಾರ ರಾತ್ರಿ 11ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೆ ಉಳಿದ ಚಾಲಕರು ಮತ್ತು ಕ್ಲೀನರ್ ಅಪಘಾತವಾಗುತ್ತಿದ್ದಂಗೆ ಬಚಾವ್ ಆಗಿದ್ದಾರೆ.
ಘಟನಾ ಸ್ಥಳಕ್ಕೆ ಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆ ಸ್ವಲ್ಪ ಹೊತ್ತು ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ವಿಜಯಪುರ ಪೊಲೀಸರು ಹಾಗೂ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಬಗೆಹರಿಸಿದ್ದಾರೆ. ಈ ಸಂಬಂಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ
PublicNext
25/03/2022 07:49 am