ನೆಲಮಂಗಲ : ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಕುಕ್ಕನಹಳ್ಳಿ ಗ್ರಾಮದಲ್ಲಿ ನೆಡೆದಿದೆ. ಗಂಗಭೈಲಪ್ಪ ಎಂಬುವರಿಗೆ ಸೇರಿದ ಜಮೀನಿನ ಕೃಷಿ ಹೊಂಡದಲ್ಲಿ ಕುಕ್ಕನಹಳ್ಳಿ ಗ್ರಾಮದ ಗಗನ್ (15) ಮೃತ ದುರ್ದೈವಿ ಬಾಲಕ, ಬಿಜಿಎಸ್ ಹಾಸ್ಟೆಲ್ ನಲ್ಲಿ ಅಡುಗೆ ಭಟ್ಟರಾಗಿದ್ದ ಪ್ರಭಾಕರ್ ಪುತ್ರ ಎನ್ನಲಾಗಿದೆ.
ಸ್ಥಳೀಯರ ಸಹಾಯದಿಂದ ಕೆರೆಯಲ್ಲಿ ಮುಳಗಿದ್ದ ಮೃತದೇಹವನ್ನ ಹೊರಕ್ಕೆ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ಮೃತದೇಹವನ್ನ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/04/2022 08:04 am