ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌ಗೆ ಮಹಿಳೆ ಬಲಿ

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಗರದ ಪ್ಯಾಲೇಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಲಕ್ಷ್ಮೀ ದೇವಿ (50 ) ಎಂಬುವರು ಅಪಘಾತದಲ್ಲಿ ಬಲಿಯಾದ ಮಹಿಳೆ. ಸಹೋದರನ ಜೊತೆ ಆಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ‌. ಹಿಂಬದಿಯಿಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ತಲೆ ಮೇಲೆ ಹರಿದ‌ ಪರಿಣಾಮ‌ ಮಹಿಳೆಯ ರುಂಡ‌-ಮುಂಡ ಪ್ರತ್ಯೇಕವಾಗಿದೆ. ಸ್ಥಳಕ್ಕೆ ಸದಾಶಿವನಗರ ಸಂಚಾರ ಪೊಲೀಸರು ಭೇಟಿಯಾಗಿ ಕೆಎಸ್ಆರ್‌ಟಿಸಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

18/04/2022 11:13 am

Cinque Terre

6.9 K

Cinque Terre

1

ಸಂಬಂಧಿತ ಸುದ್ದಿ