ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಆರ್ಭಟಿಸುತ್ತಿರುವ ನಡುವೆ ರಾಜಾಜಿ ನಗರದಲ್ಲಿ ಬಿಎಂಟಿಸಿ ಬಸ್ ಹಾಗೂ ಓಮಿನಿ ನಡುವೆ ಡಿಕ್ಕಿ ಹೊಡೆದ ಪ್ರಸಂಗ ನಡೆದಿದೆ.
ಇಂದು ಸಂಜೆ ರಾಜಾಜಿ ನಗರದ ಇಎಸ್‌ಐ ಆಸ್ಪತ್ರೆ ಬಳಿ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ವೇಗವಾಗಿ ಬಂದಿದ್ದು, ರಾಜ ಕುಮಾರ್ ರಸ್ತೆಗೆ ತಿರುಗುವ ವೇಳೆ ಓಮಿನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಬಸ್ ಹಾಗೂ ಓಮಿನಿ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಬಳಿಕ ಕೆಲ ಸಮಯ ಇಎಸ್‌ಐ ಆಸ್ಪತ್ರೆ ಬಳಿಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
PublicNext
04/05/2022 07:16 pm