ಬೆಂಗಳೂರು: ನಿನ್ನೆ ರವಿವಾರ ತಡರಾತ್ರಿ ಬೆಂಗಳೂರಿನ ಕೆಂಗೇರಿ ಪೂರ್ಣಿಮಾ ಪ್ಯಾಲೇಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ನ ಮುಂಭಾಗ ಜಖಂಗೊಡಿದೆ. ಘಟನೆಯಲ್ಲಿ ಸುಮಾರು 29 ಜನ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಆದ್ರೆ 29 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಡಿಸಿಪಿ ಕುಲ್‌ದೀಪ್ ಕುಮಾರ್ ಬಸ್ ಚಾಲಕ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದರಿಂದ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಪಡಿಸಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.
PublicNext
09/05/2022 12:42 pm