ದೊಡ್ಡಬಳ್ಳಾಪುರ: ಕೋಳಿ ಅಂಗಡಿ ಸ್ವಚ್ಛಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಕೋರ್ಟ್ ರಸ್ತೆಯ ಎಚ್ ಎಜೆ ಚಿಕನ್ ಸೆಂಟರ್ ನಲ್ಲಿ ಘಟನೆ ಸಂಭವಿಸಿದೆ. ಗೌರಿಬಿದನೂರು ತಾಲೂಕಿನ ಮರಳೂರು ಗ್ರಾಮದ ಶ್ರೀರಾಮ(37) ಮೃತಪಟ್ಟ ದುರ್ದೈವಿ. ಬುಧವಾರ ಬೆಳಿಗ್ಗೆ ಎಂದಿನಂತೆ ಅಂಗಡಿ ತೆರೆದು ಸ್ವಚ್ಚಗೊಳಿಸುತ್ತಿದ್ದ ವೇಳೆ ವಿದ್ಯುತ್ ತಗುಲಿದೆ.
ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ. ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ಗೋವಿಂದ್ ಭೇಟಿ ನೀಡಿ ಪರಿಶೀಲಿಸಿದರು.
Kshetra Samachara
18/05/2022 08:27 pm