ಬೆಂಗಳೂರು: ಬನ್ನೇರುಘಟ್ಟದಿಂದ ತಮಿಳುನಾಡಿನ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಕಾರಿಗೆ ಕಳೆದ ರಾತ್ರಿ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಬಳಿ ಮೆಟ್ರೋಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ಹಿಂಬದಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ
ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಆಗಿಲ್ಲ. ರಾತ್ರಿಯಾದರೆ ಸಾಕು ಬನ್ನೇರುಘಟ್ಟ ರಸ್ತೆಯಲ್ಲಿ ಮೆಟ್ರೋ ಕಾಮಗಾರಿಯ ಲಾರಿಗಳನ್ನು ಮನಬಂದಂತೆ ಚಲಾಯಿಸುವುದು ಅಪಘಾತಕ್ಕೆ ಕಾರಣವಾಗುತ್ತಿದೆ.
ಈ ಕುರಿತು ಮೈಕೋಲೇಔಟ್ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು
Kshetra Samachara
24/05/2022 04:03 pm