ನೆಲಮಂಗಲ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಹಿಂಬದಿಯಿಂದ ಬಂದ ಮತ್ತೊಂದು ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು, ಹೆದ್ದಾರಿ ಬಲಬದಿಯಲ್ಲಿ ಕೆಟ್ಟು ನಿಂತಿದ್ದ ತೆಂಗಿನಕಾಯಿ ತುಂಬಿದ್ದ ಬೊಲೆರೋ ವಾಹನಕ್ಕೆ ಗುದ್ದಿದೆ.
ಇನ್ನು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನಲ್ಲಿದ್ದ 30 ಪ್ರಯಾಣಿಕರ ಪೈಕಿ, 3-4 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನೂ ನೆಲಮಂಗಲ ತಾಲ್ಲೂಕು ಮಹದೇವಪುರ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಹಾಸನದ ಕಡೆಯಿಂದ ನೆಲಮಂಗಲ ಮಾರ್ಗವಾಗಿ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಬಸ್ ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅವಘಡ ತಪ್ಪಿದಂತಾಗಿದೆ. ಈ ಸಂಬಂಧ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
29/05/2022 10:47 am