ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ: ಸಿಲುಕಿದ ಇಬ್ಬರು ಕಾರ್ಮಿಕರು

ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಳೆಗೆ ನಗರದ ಖಾಸಗಿ‌ ಆಸ್ಪತ್ರೆಯ ಮೇಲ್ಛಾವಣಿ ಕುಸಿದುಬಿದ್ದಿದೆ. ನಿಮಾರ್ಣ ಕಾರ್ಯದಲ್ಲಿದ್ದ ಇಬ್ಬರು ಕಾರ್ಮಿಕರು ಅವಶೇಷದ ಅಡಿ ಸಿಲುಕಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆಯ ಮೇಲ್ಛಾವಣಿ ನಿರ್ಮಾಣ ಕಾರ್ಯಕ್ಕಾಗಿ ನಾಲ್ವರು ಕಾರ್ಮಿಕರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೆಲಸಕ್ಕಾಗಿ‌ ಆಗಮಿಸಿದ್ದರು. ಈ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದು ಕೆಳಗೆ ಬಿದ್ದಿದೆ.‌ ಕೆಲಸ ಮಾಡುತ್ತಿದ್ದ ನಾಲ್ವರು ಅವಶೇಷದಡಿ ಸಿಲುಕಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ. ಅವಶೇಷದಡಿ ಸಿಲುಕಿರುವ ರಫಿಸಾಬ್ ಮತ್ತು ಬಸವರಾಜ್ ಎಂಬಾತರನ್ನು ಜೆಸಿಬಿ ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Edited By : Manjunath H D
PublicNext

PublicNext

31/05/2022 09:10 am

Cinque Terre

33.83 K

Cinque Terre

0

ಸಂಬಂಧಿತ ಸುದ್ದಿ