ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಲಿಸುತ್ತಿದ್ದ ಟಾಟಾ ಏಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಸಂಚಾರಿ ಠಾಣಾ ವ್ಯಾಪ್ತಿಯ ಅಯ್ಯಪ್ಪ ದೇವಸ್ಥಾನದ ಬಳಿ ಇಂದು ಮಧ್ಯಾಹನ್ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಟಾಟಾ ಏಸ್ ಸುಟ್ಟು ಕರಕಲಾಗಿದೆ. ಇನ್ನೂ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ವಾಹನದಿಂದ ಕೆಳಗಿಳಿದಿದ್ದರಿಂದ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ಸ್ಥಳಕ್ಕೆ ಜಾಲಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
01/06/2022 07:22 pm