ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೈಕ್-ಲಾರಿ ನಡುವೆ ಡಿಕ್ಕಿ- ಸ್ಥಳದಲ್ಲೇ ಬೈಕ್ ಸವಾರ ಸಾವು

ಆನೇಕಲ್: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಸೂಳಗಿರಿ ಮೇಳುಮಲೈ ಬಳಿ ನಡೆದಿದೆ.

ರಾಜು 29 ವರ್ಷದ ಮೃತ ದುರ್ದೈವಿ. ರಾಜು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದ ಮೆಕ್ಯಾನಿಕ್ ವಿಭಾಗದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಕುರುಬರಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

01/06/2022 09:24 pm

Cinque Terre

16.41 K

Cinque Terre

1