ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್: ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ರಸ್ತೆಬದಿಯಲ್ಲಿ ಬ್ಯಾರಿಕೇಡ್ ಕಡೆ ಡಿಕ್ಕಿ ಹೊಡೆದ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ. ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

02/06/2022 12:25 pm

Cinque Terre

25.74 K

Cinque Terre

0

ಸಂಬಂಧಿತ ಸುದ್ದಿ