ಆನೇಕಲ್: ಶಾರ್ಟ್ ಸರ್ಕ್ಯೂಟ್ ನಿಂದ ಟೀ ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದು ಬಾಲಕಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲಹಳ್ಳಿ ಸರ್ಕಲ್ ಬಳಿ ನಡೆದಿದೆ.
ಇನ್ನು ಬೆಂಕಿ ಅವಘಡದಲ್ಲಿ 11ವರ್ಷ ಬಾಲಕಿ ಪಂಕಜ ಗಂಭೀರ ಗಾಯವಾಗಿ ಗಾಯಗೊಂಡಿದ್ದಾಳೆ.
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲಹಳ್ಳಿ ಸರ್ಕಲ್ ಮುನಿಯಪ್ಪ ಬಿಲ್ಡಿಂಗ್ ನಲ್ಲಿ ಇಂದು ಸಂಜೆ ಕುಟುಂಬಸ್ಥರ ಜೊತೆ ಬಾಲಕಿ ಅಂಗಡಿಯೊಂದರಲ್ಲಿ ಟೀ ಕುಡಿಯಲು ಹೋದ ವೇಳೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ಎಲ್ಲರೂ ಓಡಿ ಬಂದಿದ್ದಾರೆ ಆದರೆ ಬಾಲಕಿ ಅಂಗಡಿಯಲ್ಲಿಯೇ ಸಿಕ್ಕಿಹಾಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾಳೆ.
ಈ ವೇಳೆ ಸ್ಥಳೀಯ ಆಸ್ಪತ್ರೆ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದ್ದಾರೆ ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/06/2022 09:23 pm