ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಆಲ್ಟೋ ಕಾರ್ ಡಿಕ್ಕಿ-ಓಮ್ನಿ ಕಾರು ನಜ್ಜು-ಗುಜ್ಜು!

ನೆಲಮಂಗಲ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿಗೆ ಹಿಂಬದಿಯಿಂದ ಆಲ್ಟೊ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರು ಪಲ್ಟಿ ಹೊಡೆದು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಈ ವೇಳೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.

ನೆಲಮಂಗಲ ತಾಲ್ಲೂಕಿನ ಕೆರೆಕತ್ತಿಗನೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಓಮ್ನಿ ಕಾರಿನಲ್ಲಿದ್ದ ಚಾಲಕ ರುದ್ರೇಶ್ 30 ವರ್ಷ ಎಂಬುವರು ಗಾಯಗೊಂಡು, ದಾಬಸ್ ಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆಲ್ಟೊ ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Edited By : Manjunath H D
Kshetra Samachara

Kshetra Samachara

05/06/2022 11:19 am

Cinque Terre

5.7 K

Cinque Terre

0

ಸಂಬಂಧಿತ ಸುದ್ದಿ