ದೊಡ್ಡಬಳ್ಳಾಪುರ: ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎರಡು ದಿನಗಳ ಕಾರ್ಯಾಚರಣೆ ನಡೆಸಿ ಯುವಕನ ಶವ ಮೇಲೆತ್ತಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ಶರತ್ (25) ಮೃತ ಯುವಕ. ಶರತ್ ಯಲಹಂಕ ತಾಲೂಕಿನ ಹನಿಯೂರು ಗ್ರಾಮದ ನಿವಾಸಿ. ನಿನ್ನೆ ರಾಜಘಟ್ಟದ ತಾತನ ಮನೆಗೆ ಬಂದಿದ್ದ ಶರತ್, ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಕ್ಕಾಗಿ ಹುಡುಕಾಡಿದ್ದಾರೆ. ಆದರೆ, ಪತ್ತೆಯಾಗಿರಲಿಲ್ಲ.
ಇಂದು ಬೆಳಿಗ್ಗೆ ಮತ್ತೆ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದ್ದು, ಬೆಳಗ್ಗೆ ಸುಮಾರು 10 ಗಂಟೆಗೆ ಶವ ಪತ್ತೆಯಾಗಿದೆ. ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
13/06/2022 11:46 am